ಚೀನಾ ನುಗ್ಗಿದಂತೆ ನಾವು ಕರ್ನಾಟಕದೊಳಗೆ ನುಗ್ಗುತ್ತೇವೆ : ಸಂಜಯ್ ರಾವುತ್.

73
firstsuddi

ಮುಂಬೈ : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕರ್ನಾಟಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲೇ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವುತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚೀನಾ ಭಾರತದೊಳಕ್ಕೆ ನುಗ್ಗಿದಂತೆ ನಾವು ಕರ್ನಾಟಕದೊಳಗೆ ನುಗ್ಗಲಿದ್ದೇವೆ ಎಂದು ಹೇಳಿದ್ದಾರೆ.

ಚೀನಾ ಎಂಟ್ರಿ ಕೊಟ್ಟಂತೆಯೇ ನಾವೂ ಕರ್ನಾಟಕವನ್ನು ಪ್ರವೇಶಿಸುತ್ತೇವೆ. ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ. ವಿವಾದವನ್ನು ಚರ್ಚೆಯ ಮೂಲಕ ಬಗೆಹರಿಸಲು ಬಯಸುತ್ತೇವೆ. ಆದರೆ ಕರ್ನಾಟಕದ ಸಿಎಂ ಬೆಂಕಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿವಾದದ ಕುರಿತು ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ವಿವಾದ ಉಲ್ಬಣವಾಗುತ್ತಿರುವುದನ್ನು ಅರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸಲಾಯಿತು. ಆದರೂ ಯಾವುದಕ್ಕೂ ಕ್ಯಾರೆ ಎನ್ನದ ಎಂಇಎಸ್ ಪುಂಡರು ಕರ್ನಾಟಕ ಗಡಿ ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ತಡೆದು ಕ್ರಮ ಜರುಗಿಸಿದ್ದಾರೆ. ಗಡಿ ವಿವಾದ ವಿಚಾರಣೆ ಸದ್ಯ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇದೆ.