ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿ…

87
firstsuddi

ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ನಡೆದಿದೆ.

ಬಸ್‌ನ ಎಕ್ಸಲ್ ಕಟ್ ಆಗಿದ್ದು, ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಬಸ್‌ನಲ್ಲಿ 40 ಕ್ಕೂ ಅಧಿಕ ಜನ ಪ್ರಯಾಣಿಸುತ್ತಿದ್ದರು. ಅಪಘಾತದ ಹಿನ್ನೆಲೆ 15 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿಷಯ ತಿಳಿದು ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ್ ಪವಾರ್ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.