ಚೂರಿಯಿಂದ ಇರಿದುಕೊಂಡು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ…

53
firstsuddi

ಮಂಗಳೂರು: ನಗರದ ಹೊರವಲಯದ ಬೊಂದೆಲ್ ಬಳಿ ಇರುವ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ಬ್ಯಾಂಕ್ ಹಿರಿಯ ಅಧಿಕಾರಿಯೋರ್ವರು ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಾದಿರಾಜ ಕೆ. ಎ (51) ಎಂದು ಗುರುತಿಸಲಾಗಿದ್ದು, ಕರ್ನಾಟಕ ಬ್ಯಾಂಕ್ ನಲ್ಲಿ ಜನರಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ವಾದಿರಾಜ್ ಅವರಿಗೆ ಪತ್ನಿ, ಹಾಗೂ ಇಬ್ಬರು ಮಕ್ಕಳಿದ್ದು. ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಕೂಡಾ ಮನೆಯಲ್ಲಿ ಇರದ ವೇಳೆ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.