ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ.
ಆಸ್ಪತ್ರೆಯ ಟವರ್ 2 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಟವರ್ ನಲ್ಲಿದ್ದ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆರಂಭದಲ್ಲಿ ಬೆಂಕಿಯಿಂದ ತೀವ್ರ ಹೊಗೆ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ರೋಗಿಗಳನ್ನು ಸ್ಥಳದಿಂದ ಸ್ಥಳಾಂತರಿಸಲು ಹರಸಾಹಸ ಪಡಬೇಕಾಯಿತು. ಇಲ್ಲಿಯವರೆಗೆ ಯಾವುದೇ ಸಾವು, ನೋವು ಅಥವಾ ಗಾಯಗಳ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂದಿನ ಮೂರು ಬ್ಲಾಕ್ ಗಳು ಸುರಕ್ಷಿತವಾಗಿವೆ ಎಂದು ತಮಿಳುನಾಡಿನ ಆರೋಗ್ಯ ಪ್ರಧಾನ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಅವರು ತಿಳಿಸಿದ್ದಾರೆ.










