ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ತಾರೆ ಎಂದು ಅಭಿಮಾನಿಯೊಬ್ಬರು ರಕ್ತದಲ್ಲಿ ಪತ್ರ ಬರೆಯುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.
ಹುಬ್ಬಳ್ಳಿ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಎನ್. ಯಂಟ್ರುವಿ ಅವರು “ಮಾನ್ಯ ಜಗದೀಶ್ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತದೆ. ಜೈ ಕಾಂಗ್ರೆಸ್” ಎಂದು ರಕ್ತದಲ್ಲಿ ಬರೆದಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣೆ ಎದುರಿಸುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲುತ್ತಾರೆ ಎಂಬುದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದರು.










