ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ನರೇಂದ್ರ ಮೋದಿ, ರಾಮನಾಥ್ ಕೋವಿಂದ್.

75
firstsuddi

ನವದೆಹಲಿ : ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಟ್ವೀಟ್ ಮಾಡಿರುವ ಮೋದಿ, ದೇಶದ ಜನರಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಹೊತ್ತು ತರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದು, ದೀಪಾವಳಿ ಶುಭ ಸಂದರ್ಭದಲ್ಲಿ ನಾನು ಎಲ್ಲ ದೇಶವಾಸಿಗಳಿಗೆ ಶುಭಾಶಯ ತಿಳಿಸುತ್ತೇನೆ. ಕೆಡುಕಿನ ಮೇಲೆ ಒಳ್ಳೆಯದು, ಕತ್ತಲೆಯ ಮೇಲೆ ಬೆಳಕು ವಿಜಯಿಸುವ ಹಬ್ಬವಾಗಿದೆ. ನಾವೆಲ್ಲರೂ ಒಟ್ಟಾಗಿ ಈ ಹಬ್ಬವನ್ನು ಸುರಕ್ಷಿತವಾಗಿ ಆಚರಿಸೋಣ. ಪರಿಸರ ಸಂರಕ್ಷಿಸೋಣ ಎಂದು ಹೇಳಿದ್ದಾರೆ.

ಇನ್ನೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ರಜೌರಿಯ ನೌಶೇರಾ ಸೆಕ್ಟರ್ ನ ಮುಂಭಾಗದ ಪ್ರದೇಶದಲ್ಲಿ ಭಾರತೀಯ ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ.