ಮೈಸೂರು : ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಸಾರಿಗೆ ನೌಕರರು ಈ ರೀತಿ ಮುಷ್ಕರ, ಪ್ರತಿಭಟನೆ ಮಾಡಿದರೆ ಜನರೇ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ. ಜನರು ಈ ರೀತಿ ಧ್ವನಿ ಎತ್ತುವಂತೆ ಮಾಡಬೇಡಿ. ಜನರು ನಿಮ್ಮ ಮೇಲೆ ಜನ ಪ್ರೀತಿ ಇಟ್ಟಿದ್ದಾರೆ. ಆ ಪ್ರೀತಿಯನ್ನು ನೀವು ಕಳೆದುಕೊಳ್ಳಬೇಡಿ. ಮುಷ್ಕರ ಹೀಗೆ ಮುಂದುವರಿದರೆ ಎಸ್ಮಾ ಜಾರಿ ಮಾಡಬೇಕಾಗುತ್ತದೆ, ಎಸ್ಮಾ ಜಾರಿಯ ಅನಿರ್ವಾಯತೆಯನ್ನು ಸರ್ಕಾರಕ್ಕೆ ತಂದೊಡ್ಡಬೇಡಿ, ಮುಷ್ಕರ ನಿಲ್ಲಿಸಿ ಕೆಲಸಕ್ಕೆ ಹಾಜರಾಗಿ ಎಂದು ನೌಕರರಲ್ಲಿ ಮನವಿ ಮಾಡಿಕೊಂಡರು.
ಸಿದ್ದರಾಮಯ್ಯನವರು ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಎಂದು ಹೇಳುತ್ತಿದ್ದಾರೆ, ಆದರೆ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಈ ಕೆಲಸ ಮಾಡಬಹುದಿತಲ್ವಾ?. ಎಂದು ಸಂಸದ ಪ್ರತಾಪ ಸಿಂಹ ಅವರು ಪ್ರಶ್ನಿಸಿದರು.
ರೈತರ ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ ಸಾರಿಗೆ ನೌಕರರ ದಾರಿಯೂ ತಪ್ಪಿಸುತ್ತಿದ್ದಾರೆ. ಆ ಮುಖಂಡನನ್ನು ತಮ್ಮ ನಾಯಕ ಎಂದು ಸಾರಿಗೆ ನೌಕರರು ಮಾಡಿಕೊಡಿದ್ದೆ ತಪ್ಪು ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು.










