ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ ಯಡಿಯೂರಪ್ಪ.

89
firstsuddi

ಬೀದರ್ : ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಮಾಡಬಾರದು ಅಂದ್ರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಇಲ್ಲ. ಜನರು ತಮ್ಮ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಕೊರೊನಾ ಅಧಿಕವಾಗಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಮಾಡಲಾಗಿದೆ. ಅದಕ್ಕೆ ಜನರು ಸ್ಪಂದಿಸಬೇಕು, ಇಲ್ಲದಿದ್ದರೆ ಬಿಗಿಯಾದ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕಾಗುತ್ತದೆ. ಲಾಕ್ ಡೌನ್ ಮಾಡಿದರೆ ಜನರಿಗೆ ಕಷ್ಟವಾಗುತ್ತದೆ ಎಂಬುವುದು ಸರ್ಕಾರಕ್ಕೂ ಗೊತ್ತಿದೆ. ಆದರೆ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯವಾಗುತ್ತದೆ. ಅದಕ್ಕೆ ಆಸ್ಪದ ಕೊಡಬೇಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿಕೊಂಡಿದ್ದಾರೆ.