ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 1 ರಿಂದ ಶಾಲೆ ಆರಂಭಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶಾಲಾ-ಕಾಲೇಜು ಆರಂಭಿಸುವ ಕುರಿತಾಗಿ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಲಾಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಜನವರಿ 1 ರಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದೆ. ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಪ್ರಾರಂಭವಾಗಲಿದ್ದು, ಈ ಯೋಜನೆಯಡಿ ವಿದ್ಯಾರ್ಥಿಗಳು ವಾರದಲ್ಲಿ 2 ದಿನ ಶಾಲೆಗೆ ಹೋಗಿ ಪಾಠ ಕೇಳಬೇಕು. 15 ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿಗಳನ್ನು ಆರಂಭಿಸುವ ಕುರಿತು ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.










