ಜನಸಾಮಾನ್ಯರಿಗೆ ಶಾಕ್ ; ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ!

81
firstsuddi

ನವದೆಹಲಿ : ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ತೈಲ ಕಂಪನಿಗಳು ಶಾಕ್ ಕೊಟ್ಟಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 25 ರೂಪಾಯಿ ಏರಿಕೆ ಮಾಡಿವೆ. ಹೊಸ ದರ ನಿನ್ನೆಯಿಂದಲೇ ಜಾರಿಗೆ ಬಂದಿದೆ.

ತೈಲ ಕಂಪನಿಗಳು ಪ್ರತಿ ತಿಂಗಳು ಮೊದಲ ಮತ್ತು 15ನೇ ತಾರೀಖಿನಂದು ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ದರವನ್ನು ಪರಿಶೀಲಿಸುತ್ತವೆ.

ಬೆಲೆ ಏರಿಕೆ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್ ಪಿಜಿ ಸಿಲಿಂಡರ್ ಬೆಲೆ 859.5 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ 886 ರೂ. ಮುಂಬೈನಲ್ಲಿ 859.5 ರೂ. ಲಕ್ನೋದಲ್ಲಿ 897.5 ರೂ. ಚೆನ್ನೈನಲ್ಲಿ – 875.50 ರೂ. ಗೆ ತಲುಪಿದೆ. ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14.2 ಕೆಜಿಯ ಎಲ್ ಪಿಜಿ ಸಿಲಿಂಡರ್ ಬೆಲೆ 837.50 ರೂ.ಗಳಿಂದ 863 ರೂ.ಗೆ ತಲುಪಲಿದೆ ಎಂದು ವರದಿಯಾಗಿದೆ.