ಕೊಪ್ಪಳ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ, ಅವರು ಬಿಜೆಪಿಯಲ್ಲೇ ಇರುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಜನಾರ್ಧನ ರೆಡ್ಡಿ ಅವರ ವಿರುದ್ಧ ಇನ್ನಷ್ಟು ಪ್ರಕರಣಗಳು ನ್ಯಾಯಾಲಯದಲ್ಲಿದೆ. ಅವುಗಳು ಮುಗಿದ ನಂತರ ಅವರು ಬಿಜೆಪಿಯಲ್ಲಿರುತ್ತಾರೆ. ಸದ್ಯ ಅವರು ಗಂಗಾವತಿಯಲ್ಲಿ ಮನೆ ಮಾಡಿದ್ದರಿಂದ ಈ ಗೊಂದಲ ಉಂಟಾಗಿದೆ. ಅವರು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ನಮ್ಮೊಂದಿಗೆ ಇರುತ್ತಾರೆ ಎಂದು ಬಿಎಸ್‍ವೈ ಹೇಳಿದರು.
ಬಿಜೆಪಿ ಮೂರು ಬಾಗಿಲು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ಎಸ್. ಯಡಿಯೂರಪ್ಪ, ಅದು ಅವರ ದೌರ್ಬಲ್ಯ ತೋರಿಸುತ್ತದೆ. ನಾನು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ಈಗ ನನಗಿರುವುದು ಒಂದು ಆಸೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋದು. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕೆನ್ನುವುದನ್ನು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ ಅದು ಅವರ ಪಕ್ಷದ ವಿಚಾರ ಎಂದರು.










