ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಗೆ ದಾಖಲು…

60
firstsuddi

ಟೋಕಿಯೋ : ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ ನಡೆದಿದೆ. ಸದ್ಯ ಅಬೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಜಪಾನ್ ನ ನಾರಾ ಸಿಟಿಯಲ್ಲಿ ಬೆಳಗ್ಗೆ 11.30(ಜಪಾನ್ ನ ಕಾಲಮಾನ) ರ ಸುಮಾರಿಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಶಿಂಜೋ ಅಬೆ ಜುಲೈ 2006ರಲ್ಲಿ ತಮ್ಮ 52ನೇ ವರ್ಷದಲ್ಲಿ ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ಅತಿ ಕಿರಿಯ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.