ಜಪಾನ್ ಪ್ರಧಾನಿ ಭಾಷಣದ ವೇಳೆ ಸ್ಫೋಟ – ತಪ್ಪಿದ ದುರಂತ…

52
firstsuddi

ಟೋಕಿಯೋ : ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಪಶ್ಚಿಮ ಜಪಾನ್ ನ ವಕಯಾಮಾದಲ್ಲಿ ಪ್ರಧಾನಿ ಕಿಶಿಡಾ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಅವರೆಡೆಗೆ ಎಸೆಯಲಾಗಿದೆ. ಈ ವೇಳೆ ಸ್ಥಳದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಿಶಿಡಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಧಿಕಾರಿಗಳು ಸ್ಥಳದಲ್ಲಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯಿಸಲು ಸ್ಥಳೀಯ ಪೊಲೀಸರು ನಿರಾಕರಿಸಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

2022ರ ಜುಲೈನಲ್ಲಿ ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಪ್ರಚಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.