ಜಮೀನಿನಲ್ಲಿ ಕುಳಿತಿದ್ದ ವೇಳೆ ಕಾರು ಡಿಕ್ಕಿ – ಮೂವರ ದುರ್ಮರಣ

84
firstsuddi

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ.

ಪ್ರಕಾಶ (48), ಶಾಲಿನಿ (10) ಮತ್ತು ಯಶೋಧಾ (8) ಮೃತ ದುರ್ದೈವಿಗಳು. ಯಶೋಧಾ ಮತ್ತು ಶಾಲಿನಿ ಜಮೀನಿನಲ್ಲಿ ಕುಳಿತಿದ್ದ ವೇಳೆ ಚಾಲಕ ಪ್ರಕಾಶ್ ಅವರ ನಿಯಂತ್ರಣ ತಪ್ಪಿ ಕಾರು ಮಕ್ಕಳಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮಕ್ಕಳಿಗೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಹಿರೇಕರೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನೂ ಘಟನೆಯಲ್ಲಿ ಕಾರನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.