ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಓರ್ವ ಭಯೋತ್ಪಾದಕನ ಹತ್ಯೆ…

55
firstsuddi

ಜಮ್ಮ ಮತ್ತು ಕಾಶ್ಮೀರ: ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ನಾಲ್ವರು ಉಗ್ರರಲ್ಲಿ ಓರ್ವನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಇಂದು ಮುಂಜಾನೆ ಜಮ್ಮುವಿನ ಅಖ್ನೂರ್‌ನ ಖೌರ್ ಸೆಕ್ಟರ್‌ನ ಅಂತರಾಷ್ಟ್ರೀಯ ಗಡಿಯಲ್ಲಿ ನಾಲ್ವರು ಉಗ್ರರು ಭಾರತದ ಗಡಿಯಲ್ಲಿ ನುಸುಳಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಭದ್ರತಾ ಪಡೆಗಳು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿವೆ. ಈ ವೇಳೆ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ.

ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿ ಗುಂಡಿನ ದಾಳಿಗೆ ಓರ್ವ ಭಯೋತ್ಪಾದಕ ಮೃತಪಟ್ಟಿದ್ದಾನೆ. ಮೃತದೇಹವನ್ನು ಸಹಚರರು ಅಂತರಾಷ್ಟ್ರೀಯ ಗಡಿಯ ಮೂಲಕ ತೆಗೆದುಕೊಂಡು ಹೋಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.