ನವದೆಹಲಿ : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಆರ್ಟಿಕಲ್ 370 ಮತ್ತು 35(ಎ)ನ್ನು ರದ್ದುಗೊಳಿಸಲಾಗಿದ್ದು, ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಮ್ಮು ಕಾಶ್ಮೀರದ ಸ್ಥಿತಿಗತಿ ಬಗ್ಗೆ ಚರ್ಚಿಸಿ 370ನೇ ವಿಧಿ ರದ್ದುಗೊಳಿಸುವುದಾಗಿ ನಿರ್ಧಾರ ಮಾಡಿದ್ದು, ಆದೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ. ಬಳಿಕ ಸಂಸತ್‍ನ ಕಲಾಪದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ಮತ್ತು 35(ಎ)ನ್ನು ರದ್ದು ಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದರು.