ಜಮ್ಮು ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಬೆಳಗಾವಿಯ ಸಿಆರ್​ಪಿಎಫ್​ ಯೋಧ ಆತ್ಮಹತ್ಯೆ…

243
firstsuddi

ಜಮ್ಮು ಕಾಶ್ಮೀರ : ಬೆಳಗಾವಿಯ ಯೋಧರೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ. ಅಶ್ವೇರಪ್ಪ(33) ಆತ್ಮಹತ್ಯೆ ಮಾಡಿಕೊಂಡ ಯೋಧ ಎಂದು ಗುರುತಿಸಲಾಗಿದ್ದು, ಸಿಆರ್​ಪಿಎಫ್​ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಅಶ್ವೇರಪ್ಪಾ ಅವರು ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿ ಕ್ಯಾಂಪ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ತನಗೆ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯೋಧನನ್ನು ಸಹೋದ್ಯೋಗಿಗಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಯೋಧ ಅಶ್ವೇರಪ್ಪಾ ಅವರು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.