ಜಮ್ಮು ಕಾಶ್ಮೀರದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ ಮೊದಲ ಬಲಿ-ಸಾವಿನ ಸಂಖ್ಯೆ 12ಕ್ಕೆ ಏರಿಕೆ…

145
firstsuddi

ಶ್ರೀನಗರ : ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿದ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 65 ವರ್ಷದ ವೃದ್ಧ ಸಿಂಗಪುರ್‍ನ ಹೈದರ್‍ಪೊರಾದಿಂದ ಬಂದಿದ್ದು, ಬಳಿಕ ತಪಾಸಣೆಗೆ ಒಳಪಡಿಸಿ ತಮಿಳುನಾಡಿನ ರಾಜಾಜಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.