ಶ್ರೀನಗರ : ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ನೌಶೇರಾಗೆ ಭೇಟಿ ನೀಡಿ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ನಾನು ಪ್ರತಿ ದೀಪಾವಳಿಯನ್ನು ನಮ್ಮ ಗಡಿ ಕಾಯುವ ಸೈನಿಕರೊಂದಿಗೆ ಕಳೆದಿದ್ದೇನೆ. ನಾನು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ನಿಮ್ಮ ಕುಟುಂಬದ ಸದಸ್ಯನಾಗಿ ಬಂದಿದ್ದೇನೆ. ಇಂದು ಇಲ್ಲಿ ನಮ್ಮ ಸೈನಿಕರಿಗಾಗಿ ಕೋಟ್ಯಂತರ ಭಾರತೀಯರ ಆಶೀರ್ವಾದವನ್ನು ನನ್ನೊಂದಿಗೆ ತಂದಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಇದಾಗ ಬಳಿಕ ಪ್ರಧಾನಿ ಮೋದಿ ಅವರು ಸೈನಿಕರಿಗೆ ಸಿಹಿ ತಿನಿಸಿ ದೀಪಾವಳಿಯ ಶುಭಾಶಯ ಕೋರಿದರು.










