ಶ್ರೀನಗರ : ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಹಿಮಾಪಾತ ಸಂಭವಿಸಿ ಓರ್ವ ಯೋಧ ಹುತಾತ್ಮರಾಗಿ ಇನ್ನೂ ಮೂವರು ಯೋಧರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ 2ಗಂಟೆ ಸುಮಾರಿಗೆ ಯೋಧರು ಸೇನಾ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಹಿಮಾಪಾತ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯಚರಣೆ ಆರಂಭಿಸಿದ ಸಿಬ್ಬಂಧಿಗಳು ಓರ್ವ ಯೋಧನನ್ನು ರಕ್ಷಿಸಿದ್ದು, ಓರ್ವ ಯೋಧರು ಮೃತಪಟ್ಟಿದ್ದಾರೆ. ನಾಪತ್ತೆಯಾಗಿರುವ ಮೂವರು ಯೋಧರಿಗೆ ಶೋಧಕಾರ್ಯ ನಡೆಸುತ್ತಿದ್ದು, ಅವರೂ ಕೂಡಾ ಹುತಾತ್ಮರಾಗಿದ್ದಾರೆ ಎಂದು ಶಂಕಿಸಲಾಗಿದ್ದು, ಕಠಿಣ ಹವಾಮಾನ ಪರಿಸ್ಥಿತಿಯಿಂದಾಗಿ ರಕ್ಷಣಾ ಕಾರ್ಯಾಚರಣೆ ನಡೆಸುವುದು ಕಷ್ಟಕರವಾಗಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










