ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ, ಇಬ್ಬರು ಉಗ್ರರ ಬಲಿ…

179
firstsuddi

ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆ ಆವಂತಿಪೊರಾದ ಬ್ಯ್ರಾಬಂಡಿನಾ ಪ್ರದೇಶದ ಮನೆಯಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ತಿಳಿದು ಭದ್ರತಾ ಪಡೆಗಳು ಮನೆಯನ್ನು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಉಗ್ರರು ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.