ಜಮ್ಮು ಕಾಶ್ಮೀರಾದಲ್ಲಿ ಎನ್‍ಕೌಂಟರ್-ಇಬ್ಬರು ಉಗ್ರರು, ಓರ್ವ ಸಹಚರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

213
firstsuddi

ಶ್ರೀನಗರ : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಆದರೆ ಈ ನಡುವೆ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಜಮ್ಮು ಕಾಶ್ಮೀರಾದ ಪುಲ್ವಾಮಾದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮ ಜಿಲ್ಲೆಯ ಅವಂತಿಪೊರಾದ ಗೋರಿಪೋರಾ ಪ್ರದೇಶದಲ್ಲಿ ಕೆಲವು ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಯೋಧರು ಇಂದು ಮುಂಜಾನೆಯಿಂದ ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆಯ ವಿಷಯ ತಿಳಿದ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಬ್ಬರು ಯೋಧರು ಹಾಗೂ ಓರ್ವ ಸಹಚರನನ್ನು ಹೊಡೆದುರುಳಿಸಿದ್ದಾರೆ. ಅಲ್ಲದೇ ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನೂ ಹಲವು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.