ಬಾರಾಮುಲ್ಲಾ : ಜಮ್ಮು ಕಾಶ್ಮೀರಾದ ಸೊಪೋರ್ ನಲ್ಲಿ ಭಾರತೀಯ ಸೈನಿಕರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎಲ್‍ಇಟಿ ಉಗ್ರ ಸಂಘಟನೆಯ ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೊಪೋರ್ ನ ಪೊತ್ಕಾ ಮುಕಾಮ್ ಮತ್ತು ಛಾನ್ಪರಾ ಅಥೂರಾ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಸೊಪೋರ್ ನ ಪೊಲೀಸರು ಸಿ.ಆರ್.ಪಿ.ಎಫ್ ಪಡೆಗಳು ಹಾಗೂ 52 ರಾಷ್ಟ್ರೀಯ ರೈಫಲ್ಸ್ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಈ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










