ಜಮ್ಮು ಕಾಶ್ಮೀರದ ಜಿಲ್ಲಾಧಿಕಾರಿ ಕಚೇರಿ ಬಳಿ ಗ್ರೆನೇಡ್ ದಾಳಿ ನಡೆಸಿದ ಉಗ್ರರು, 6ಮಂದಿ ಗಾಯ…

233
firstsuddi

ಜಮ್ಮು ಕಾಶ್ಮೀರ : ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, 6ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 11ಗಂಟೆ ಸುಮಾರಿಗೆ ಗಸ್ತು ತಿರುಗುತ್ತಿದ್ದ ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಉಗ್ರರ ಗುರಿ ತಪ್ಪಿದ ಕಾರಣ ಭಾರಿ ಅನಾಹುತ ತಪ್ಪಿದಂತಾಗಿದೆ. ಘಟನೆಯಲ್ಲಿ 12ವರ್ಷದ ಬಾಲಕ ಸೇರಿದಂತೆ 6ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪೋಟ ಸಂಭವಿಸುತ್ತಿದ್ದಂತೆ ಭದ್ರತಾ ಸಿಬ್ಬಂದಿಗಳು ಸ್ಥಳವನ್ನು ಸುತ್ತುವರೆದಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.