ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ನಾಯಕ ದೇವೇಂದ್ರ ಸಿಂಗ್ ರಾಣಾ ನಿಧನ.

36

ಹರಿಯಾಣ: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ವಿಧಾನಸಭಾ ಕ್ಷೇತ್ರದ ಹಿರಿಯ ಬಿಜೆಪಿ ನಾಯಕ ಮತ್ತು ಹಾಲಿ ಶಾಸಕ ದೇವೇಂದ್ರ ಸಿಂಗ್ ರಾಣಾ ಅವರು ಗುರುವಾರ ಹರಿಯಾಣದ ಫ್ರೈದಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೇರಿದಂತೆ ಅನೇಕ ಗಣ್ಯರು ಬಿಜೆಪಿ ಶಾಸಕ ದೇವೆಂದರ್ ಸಿಂಗ್ ರಾಣಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಜನರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟ ದೇಶಭಕ್ತ ಮತ್ತು ವ್ಯಾಪಕ ಗೌರವಾನ್ವಿತ ನಾಯಕನನ್ನು ದೇಶ ಕಳೆದುಕೊಂಡಿದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಜಮ್ಮು ಮತ್ತು ಕಾಶ್ಮೀರ ಎಲ್‍ಜಿ ಮನೋಜ್ ಸಿನ್ಹಾ ಅವರು, “ದೇವೇಂದ್ರ ಸಿಂಗ್ ರಾಣಾ ಅವರ ಅಕಾಲಿಕ ನಿಧನದ ಬಗ್ಗೆ ತಿಳಿದು ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ನಾವು ದೇಶಭಕ್ತ ಮತ್ತು ಗೌರವಾನ್ವಿತ ನಾಯಕನನ್ನು ಕಳೆದುಕೊಂಡಿದ್ದೇವೆ. ಇಲ್ಲಿನ ಜನರ ಯೋಗಕ್ಷೇಮಕ್ಕಾಗಿ ಅವರು ದುಡಿದಿದ್ದಾರೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಹೇಳಿದರು.