ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ಕಲ್ಲೇನಹಳ್ಳಿ ಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದಿಂದ ಭಾನುವಾರ ನಡೆದ ಐದನೇ ಜಿಲ್ಲಾ ಜಾನಪದ ಸಮ್ಮೇಳನವನ್ನು ಉದ್ಘಾಟಿಸಿ ಸಾಹಿತಿ ಚಟ್ನಳ್ಳಿ ಮಹೇಶ್ ಅವರು ಮಾತನಾಡಿದರು. ಜಾನಪದ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಮನೆಯ ಹಿರಿಯರು ಮಕ್ಕಳಿಗೆ ನಮ್ಮ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಕಲಿಸುವ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಅದು ಮುಂದಿನ ತಲೆಮಾರಿಗೆ ಉಳಿಯುತ್ತದೆ ಎಂದು ತಿಳಿಸಿದರು. ಶಾಸಕ ಜಿ. ಹೆಚ್.ಶ್ರೀನಿವಾಸ್ ಮಾತನಾಡಿ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿ ಚಿರಸ್ತಾಯಿಯಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಜೀವಂತವಾಗಿದೆ ಎಂದರು. ಜಾನಪದ ಕೋಗಿಲೆ ಕೆ.ಆರ್.ಲಿಂಗಪ್ಪನವರನ್ನು ಸ್ಮರಿಸಲು ಈ ಸಮ್ಮೇಳನ ಸಹಕಾರಿಯಾಗಿದೆ ಎಂದು ಹೇಳಿದರು. ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ ನಿರಂತರವಾಗಿ ದುಡಿಯುತ್ತಿರುವುದು ಶ್ಲಾಘನೀಯ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್ ಜಾನಪದ ಕಲೆ ಮತ್ತು ಕಲಾವಿದರು ಇಂದು ಸಂಕಷ್ಟದಲ್ಲಿದ್ದಾರೆ ಅವರಿಗೆ ಕಾರ್ಯಕ್ರಮ ಮಾಡಲು ಅನುದಾನವಿಲ್ಲ. ಮಾಸಾಶನ ದೊರೆಯುತ್ತಿಲ್ಲ. ಆಧುನಿಕತೆಯ ಗೀಳಿನಲ್ಲಿರುವ ಇಂದಿನ ಯುವ ಪೀಳಿಗೆ ಜಾನಪದವನ್ನು ಪ್ರೋತ್ಸಾಹಿಸುತ್ತಿಲ್ಲ ಎಂದು ವಿಷಾದಿಸಿದರು. ಸಮ್ಮೇಳನಾಧ್ಯಕ್ಷ ಕರಿಬಸಪ್ಪ ಮಾತನಾಡಿ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿ ಉಳಿದರೆ ನಮ್ಮತನ ಉಳಿಯುತ್ತದೆ ಜಾನಪದವನ್ನು ಕಳೆದುಕೊಂಡರೆ ನಾವು ಜಗತ್ತಿನೆದುರು ಒಂಟಿಯಾಗಿ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಸಿದರು. ಶಾಸಕ ಎಸ್.ಎಂ. ನಾಗರಾಜು. ಜಿಪಂ ಮಾಜಿ ಸದಸ್ಯ ಎಂ. ಕೃಷ್ಣಮೂರ್ತಿ. ಮಾತನಾಡಿದರು. ಸಿ.ಎಂ.ಶಂಕರಪ್ಪ. ತಿಪ್ಪೇಸ್ವಾಮಿ. ಆರ್. ನಾಗೇಶ್. ಜಿ.ಬಿ. ಸುರೇಶ್. ರಂಜಿತಾ. ಗಾಯತ್ರಿ ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ಕರ್ನಾಟಕ ಜಾನಪದ ಪರಿಷತ್ತಿನ ಉಪಾಧ್ಯಕ್ಷ ತಿಪ್ಪೇಶಪ್ಪ. ಆರ್. ನಾಗೇಶ್. ಬಸಪ್ಪ. ರಾಜಣ್ಣ. ಜಾನಪದ ಕಲಾವಿದೆ ಮುಗುಳಿ ಲಕ್ಷ್ಮಿದೇವಮ್ಮ. ಶಿಕ್ಷಕ ಬಸವರಾಜ್. ಕಾರೆಹಳ್ಳಿ ಬಸಪ್ಪ. ಗ್ರಾಪಂ ಅಧ್ಯಕ್ಷ ತಿಪ್ಪೇಶ್. ಹಿರಿಯ ವೀರಗಾಸೆ ಕಲಾವಿದ ಡಾ ಮಾಳೇನಹಳ್ಳಿ ಬಸಪ್ಪ. ಶಶಿಧರ. ಓಂಕಾರ ಸ್ವಾಮಿ. ಪಂಚಾಕ್ಷರಿ. ಕೆ.ಎಲ್. ಕಾಂತರಾಜು. ಜಿಪಂ ಮಾಜಿ ಉಪಾಧ್ಯಕ್ಷ ಕೆ. ಆರ್. ಆನಂದಪ್ಪ. ಬಿಜೆಪಿ ಜಿಲ್ಲಾಧ್ಯಕ್ಷ ಆರ್ ದೇವರಾಜ ಶೆಟ್ಟಿ ಉಪಸ್ಥಿತರಿದ್ದರು.
Home ಸ್ಥಳಿಯ ಸುದ್ದಿ ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿ ಮಾನವನನ್ನು ಸುಸಂಸ್ಕೃತನನ್ನಾಗಿ ಮಾಡುತ್ತದೆ- ಸಾಹಿತಿ ಚಟ್ನಳ್ಳಿ ಮಹೇಶ್.










