ಜಾನ್ಸನ್ ಆ್ಯಂಡ್ ಜಾನ್ಸನ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದ ಭಾರತ ಸರ್ಕಾರ…

149
firstsuddi

ನವದೆಹಲಿ : ಅಮೆರಿಕಾ ಮೂಲದ ಖ್ಯಾತ ಔಷಧ ತಯಾರಿಕಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರ ಅನುಮೋದನೆ ನೀಡಿದೆ.

2021ರ ಆಗಸ್ಟ್ 5 ರಂದು ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ ತನ್ನ ಸಿಂಗಲ್ ಡೋಸ್ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೊಡಿಸಲು ಇಯುಎಗೆ ಅರ್ಜಿ ಸಲ್ಲಿಸಿತ್ತು. ಇದೀಗ ತುರ್ತು ಬಳಕೆಗೆ ಅವಕಾಶ ಕೊಡಲಾಗಿದೆ. ಈಗ ದೇಶದಲ್ಲಿ ತುರ್ತು ಬಳಕೆಗೆ 5 ಕೊರೊನಾ ಲಸಿಕೆಗಳಿವೆ. ಇದು ನಮ್ಮ ರಾಷ್ಟ್ರದ ಕೋವಿಡ್ ವಿರುದ್ಧದ ಸಾಮೂಹಿಕ ಹೋರಾಟವನ್ನು ಮತ್ತಷ್ಟು ಹೆಚ್ಚಿಸುತ್ತದೆ” ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಭಾರತದಲ್ಲಿ ಈಗಾಗಲೇ ಕೋವಿಶೀಲ್ಡ್, ಕೊವಾಕ್ಸಿನ್, ಮಾಡೆರ್ನಾ, ಸ್ಪುಟ್ನಿಕ್ ಗಿ ಲಸಿಕೆಗೆ ಅನುಮತಿ ನೀಡಲಾಗಿದೆ. ಇದರ ಜೊತೆಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಮೂಲಕ ಭಾರತದಲ್ಲಿ ಕೋವಿಡ್ ಲಸಿಕೆಗಳ ಸಂಖ್ಯೆ ಒಟ್ಟು 5ಕ್ಕೆ ಏರಿಕೆಯಾಗಿದೆ.