ದಾವಣಗೆರೆ : ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಸ್ವಕ್ಷೇತ್ರ ಚನ್ನಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆ. ಚನ್ನಗಿರಿಯಲ್ಲಿ ಬೆಂಬಲಿಗರು ಮಾಡಾಳ್ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಂಡರು.
ಕಳೆದ ಆರು ದಿನಗಳಿಂದ ಶಾಸಕ ಮಾಡಾಳ್ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿ, ಬಂಧಿಸಿದ್ದರು. ಬಳಿಕ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು.
ಮಾಡಾಳ್ ಪ್ರಕರಣದ ಎ1 ಆರೋಪಿಯಾಗಿದ್ದರಿಂದ, ತಮ್ಮ ಬಂಧನದ ಸಾಧ್ಯತೆ ಹಿನ್ನೆಲೆ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದರು. ಇಂದು ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.










