ಜಾರಿ ನಿರ್ದೇಶನಾಲಯದ 6 ಮಂದಿ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್…

144
firstsuddi

ನವದೆಹಲಿ : ಜಾರಿ ನಿರ್ದೇಶನಾಲಯದ 6 ಮಂದಿ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಹೀಗಾಗಿ ಜಾರಿ ನಿರ್ದೇಶನಾಲಯ ಕೇಂದ್ರ ಕಚೇರಿಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಸೋಂಕು ತಗುಲಿರುವ 6 ಮಂದಿ ಅಧಿಕಾರಿಗಳ ಸಂಪರ್ಕದಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿ ಅಧಿಕಾರಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.