ಬೆಂಗಳೂರು : ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿರುವ ವೇಳೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ವಿನಯ್ ಕುಮಾರಿ(44) ಸಾವನಪ್ಪಿದ ಮಹಿಳೆ. ವಿನಯ್ ಕುಮಾರಿ ಅವರು ಅವಿವಾಹಿತರು. ಜಿಮ್, ಡ್ಯಾನ್ಸ್ ಮಾಡ್ಕೊಂಡಿದ್ದರು. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಮಲ್ಲೇಶ್ ಪಾಳ್ಯದಲ್ಲಿರುವ ಜಿಮ್ ನಲ್ಲಿ ವಿನಯ್ ಕುಮಾರಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರು ವಿನಯ್ ಕುಮಾರಿ ಅವರನ್ನು ಆಸ್ಪತ್ರೆ ಸಾಗಿಸಿದ್ದಾರೆ. ಆದರೆ ಅವರು ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಬೈಯ್ಯಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










