ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ಇಬ್ಬರೂ ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ.
ಈ ಇಬ್ಬರೂ ನಿನ್ನೆ ಸಾಯಂಕಾಲದಿಂದ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸುತ್ತಿದ್ದರು. ಆದರೆ, ಬೆಳಗಾಗುವಷ್ಟರಲ್ಲಿ ಇಬ್ಬರ ಮೃತದೇಹಗಳು ಕಾಗಿಣಾ ನದಿಯ ತೀರದಲ್ಲಿ ಬಿದ್ದಿದ್ದವು. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ-ಮಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










