ಜೀವ ಬೆದರಿಕೆ ಆರೋಪ – ‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ದೂರು ದಾಖಲು…

50
firstsuddi

ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ಕಲಾವಿದೆ ನಯನಾ ವಿರುದ್ಧ ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ಬೆಂಗಳೂರಿನ ಆರ್.ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಯನಾ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಸೋಮಶೇಖರ್ ಎನ್ನುವವರು ದೂರು ನೀಡಿದ್ದಾರೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದರು.

ಇದೀಗ ಹಣದಲ್ಲಿ ಪಾಲು ನೀಡಬೇಕು ಎಂದು ನಯನಾ ಅವರು ಸೋಮಶೇಖರ್ ಗೆ ಕರೆ ಮಾಡಿ ಒತ್ತಾಯ ಹೇರಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಯಲ್ಲೇ ಕುಳಿತು ಬೆದರಿಕೆ ಆಗುವಂತಹ ವಾಯ್ಸ್ ಮೆಸೇಜ್ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನಯನಾ ಅವರು ಕೆಟ್ಟದಾಗಿ ನಿಂದಿಸಿ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ನಯನಾಳನ್ನು ಠಾಣೆಗೆ ಕರೆಯಿಸಿ ಇನ್ಮುಂದೆ ನಮ್ಮ ತಂಟೆಗೆ ಬರದಂತೆ ತಿಳುವಳಿಕೆ ಹೇಳಿ, ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಸೋಮಶೇಖರ್ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.