ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…

83
firstsuddi

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜುಲೈ ಎರಡನೇ ವಾರದಲ್ಲಿ ‌ಪ್ರಕಟವಾಗಲಿದೆ. ತಜ್ಞರು ಸೂಚಿಸಿದ ಮಾನದಂಡಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಒಂದು ವೇಳೆ ಯಾವುದೇ ವಿದ್ಯಾರ್ಥಿ ಹೆಚ್ಚಿನ ಅಂಕದ ನಿರೀಕ್ಷೆ ಇದ್ದರೆ ಅಂತಹ ವಿದ್ಯಾರ್ಥಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಶಾಲೆಗಳ‌ ಆರಂಭದ ಬಗ್ಗೆ ಬಹಳಷ್ಟು ಚರ್ಚೆಗಳಾಗಿದೆ. ಡಾ.ದೇವಿಶೆಟ್ಟಿ ಸಮಿತಿ ಮಧ್ಯಂತರ ವರದಿ ನೀಡಿದೆ. ಗ್ರಾಮೀಣ ಭಾಗದ ಮಕ್ಕಳು ‌ಕಲಿಕೆಯಿಂದ ವಂಚಿತರಾಗಬಾರದು ಎಂಬುದು ‌ನಮ್ಮ‌ ಇಚ್ಚೆ ಯಾಗಿದೆ. ವಿಷಯ ಪರಿಣಿತರು,‌ ಸರ್ಕಾರದ ತಾಂತ್ರಿಕ ಸಲಹೆಗಾರ ರು ಹಾಗೂ ಮಕ್ಕಳ ತಜ್ಞರನ್ನೊಳಗೊಂಡ ಟಾಸ್ಕ್ ಪೋರ್ಸ್ ರಚಿಸಲಾಗುವುದು. ಜುಲೈ 1 ರಿಂದ ಚಂದನ ವಾಹಿನಿ‌ ಮೂಲಕ ಎಲ್ಲ ತರಗತಿಗಳಿಗೆ ಪಾಠ ಆರಂಭಿಸಲಾಗುವುದು.

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೊಳಿಸಲು ಸುಗ್ರೀವಾಜ್ಞೆ ತರಲಾಗಿದೆ. ಜೂನ್ 30 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 75 ಸಾವಿರ ಅರ್ಜಿಗಳು ಬಂದಿದ್ದು, ಪಾರದರ್ಶಕ, ಶಿಕ್ಷಕ ಸ್ನೇಹಿ ಆಗಿ ವರ್ಗಾವಣೆ ಆಗಲಿದೆ. ಶಿಕ್ಷಕ ಮಿತ್ರ ಆಪ್ ಮೂಲಕ ಮನೆಯಲ್ಲೇ ‌ಕುಳಿತು ವರ್ಗಾವಣೆ ‌ಕೌನ್ಸಿಲಿಂಗ್​ ನಲ್ಲಿ ಭಾಗವಹಿಸಬಹುದು ಎಂದರು.