ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಆರಂಭ- ಸಿಎಂ ಸ್ಪಷ್ಟನೆ…

49
firstsuddi

ಬೆಂಗಳೂರು: ಜುಲೈ 10ರಿಂದ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಆರಂಭವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್​ದಾರರಿಗೆ ಜುಲೈನಲ್ಲಿ 5 ಕೆಜಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಿದ್ದೆವು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆಯಲ್ಲಿ ಆಗಸ್ಟ್ ತಿಂಗಳ ಬಿಲ್ ಉಚಿತ ಎಂದರು.