ನವದೆಹಲಿ : ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 11 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜುಲೈ 11ರ ಭಾನುವಾರ ಬೆಳಗ್ಗೆ 10.30ಕ್ಕೆ ನೂತನ ರಾಜ್ಯಪಾಲರ ಪದಗ್ರಹಣ ಕಾರ್ಯಕ್ರಮ ರಾಜಭವನದಲ್ಲಿ ನಡೆಯಲಿದ್ದು, ಪ್ರಮಾಣವಚನವನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಬೋಧಿಸಲಿದ್ದಾರೆ. ಕೊರೊನಾ ಮಾರ್ಗಸೂಚಿಯಂತೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.










