ಜುಲೈ 30ಕ್ಕೆ ಸಿಇಟಿ ಫಲಿತಾಂಶ ಪ್ರಕಟ…

54
firstsuddi

ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್ ಅಶ್ವತ್ಥ ನಾರಾಯಣ ಅವರು ಮಾಹಿತಿ ನೀಡಿದ್ದಾರೆ.

ಕಳೆದ ಜೂನ್ 16, 17 ಮತ್ತು 18ರಂದು ಸಿಇಟಿ ಪರೀಕ್ಷೆ ನಡೆದಿತ್ತು. ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ ಮೂಲಕ ಅಂಕಗಳನ್ನು ಅಪ್ ಲೋಡ್ ಮಾಡಲು ನಾಳೆ ಸಂಜೆಯವರೆಗೆ ಅವಕಾಶ ನೀಡಲಾಗಿದೆ.

ಫಲಿತಾಂಶವನ್ನು ಪ್ರಕಟಿಸಿದ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ kea. kar.nic.in ಮತ್ತು cetonline.karnataka.gov.in/kea ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.

ಈ ಬಾರಿ ಸಿಇಟಿ ಪರೀಕ್ಷೆಗೆ ಒಟ್ಟು 2.11 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 1.4 ಲಕ್ಷ ವಿದ್ಯಾರ್ಥಿಗಳು ಹಾಗೂ 1.7 ಲಕ್ಷ ವಿದ್ಯಾರ್ಥಿನಿಯರು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.