ಜೂಜು ಅಡ್ಡೆ ಮೇಲೆ ದಾಳಿ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೀರುಪಾಲಾದ ವ್ಯಕ್ತಿ…

81
firstsuddi

ಮೈಸೂರು : ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದಾಗ ವ್ಯಕ್ತಿಯೋರ್ವ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೀರುಪಾಲಾಗಿದ್ದಾನೆ.

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ನಂಜುಂಡ (37) ಎಂಬುವವರು ಮೃತಪಟ್ಟಿದ್ದಾರೆ. ನಿನ್ನೆ ಸಂಜೆ 6 ಗಂಟೆ ಸಮಯದಲ್ಲಿ 5 ರಿಂದ 6 ಜನ ಜೂಜಾಡುತ್ತಿದ್ದರು. ಈ ವೇಳೆ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಂಜುಂಡ ಹದಿನಾರು ಕೆರೆಗೆ ಹಾರಿದ್ದು, ಈಜು ಬಾರದೆ ನೀರು ಪಾಲಾಗಿದ್ದಾನೆ.

ನಂಜನಗೂಡು ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಇಂದು ಬೆಳಗ್ಗೆ ನಂಜುಂಡನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.