ಜೂನ್.14ರವರೆಗೆ ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ವಿಸ್ತರಣೆ : ಸಚಿವ ಸುರೇಶ್ ಕುಮಾರ್.

101
firstsuddi

ಬೆಂಗಳೂರು : ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ರಜೆ ಅವಧಿಯನ್ನು ಪರಿಷ್ಕರಿಸಿದೆ.

ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಪ್ರಾಥಮಿಕ ಶಾಲೆಗಳಿಗೆ ಜೂನ್ 14ರ ತನಕ ಹಾಗೂ ಪ್ರೌಢಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ವಿಸ್ತರಿಸಲಾಗಿದ್ದು, ಜೂನ್ 15 ರಿಂದ 8-10 ನೇ ತರಗತಿಗಳು ಪ್ರಾರಂಭವಾಗಲಿವೆ. ಪ್ರೌಢಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು. ದೂರವಾಣಿ  ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು. ಜೂನ್ 1 ರಿಂದ 14 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ ಎಂದರು.