ಜೂನ್ 21ರವರೆಗೆ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ…

176
firstsuddi

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಜೂನ್ 21ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಹವಮಾನ ಇಲಾಖೆ ತಿಳಿಸಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 19 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಹಾವೇರಿ, ಧಾರಾವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು. ಕರಾವಳಿಯಲ್ಲಿ ಘಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 4.8ಮೀ ಅಷ್ಟು ಎತ್ತರದ ಅಲೆಗಳು ಬರುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.