ಜೂನ್ 3ನೇ ವಾರ ದ್ವಿತೀಯ ಪಿಯುಸಿ ಫಲಿತಾಂಶ : ಬಿ.ಸಿ.ನಾಗೇಶ್.

59
firstsuddi

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶವನ್ನು ಜೂನ್ 3ನೇ ವಾರದಲ್ಲಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದರು.

ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.