ಜೆಡಿಎಸ್ ಕಚೇರಿಯಲ್ಲಿ ಕುಮಾರಸ್ವಾಮಿ ಸುಮಾರು 15ನಿಮಿಷಗಳ ಕಾಲ ಕಣ್ಣೀರು ಹಾಕಿದ್ದರು : ಹೆಚ್.ಡಿ. ದೇವೇಗೌಡ…

271
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಈ ಹಿಂದೆ ವಿಶ್ವಾಸ ಮತಯಾಚನೆ ಸಾಬೀತುಪಡಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ಪತನವಾಗಿತ್ತು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಸರ್ಕಾರ ಪತನವಾದರೂ ನನಗೆ ಚಿಂತೆ ಇಲ್ಲ. ಆದರೆ ಯಾರಿಂದಲೂ ಜೆಡಿಎಸ್ ಪಕ್ಷವನ್ನು ಅಂತ್ಯ ಮಾಡಲು ಸಾಧ್ಯವಿಲ್ಲ. ನನ್ನ ಮಗ ಸಿಎಂ ಆಗಿದ್ದ ಸಂದರ್ಭದಲ್ಲಿ ಸಾಕಷ್ಟು ನೋವು ಅನುಭವಿಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಕುಮಾರಸ್ವಾಮಿ ಸುಮಾರು 15ನಿಮಿಷಗಳ ಕಾಲ ಕಣ್ಣೀರು ಹಾಕಿದ್ದರು ಎಂದು ಹೇಳಿದ್ದು, ಈ ವೇಳೆ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಹರಿದಾಡುತ್ತಿರುವ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ವರದಿ ಸುಳ್ಳು. ಯಾರು ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ನಾಶ ಮಾಡಲು ಆಗುವುದಿಲ್ಲ. ಆದರೆ ಸರ್ಕಾರದ ಎಲ್ಲಾ ಕೆಲಸವನ್ನು ವಿರೋಧ ಮಾಡುವುದಿಲ್ಲ. ನಾವು ನಮ್ಮ ಪಕ್ಷಕ್ಕಾಗಿ ವಿಷಯಾಧಾರಿತವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.