ಜೆಡಿಎಸ್ ಭದ್ರಕೋಟೆ ಕೆ.ಆರ್. ಪೇಟೆಯಲ್ಲಿ ಅರಳಿದ ಕಮಲ-ಕೆ.ಸಿ. ನಾರಾಯಣ ಗೌಡ ಅವರಿಗೆ ಗೆಲುವು…

505
firstsuddi

ಮಂಡ್ಯ : ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ. ನಾರಾಯಣ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಯಿಸಿದ ನಾರಾಯಣ ಗೌಡ ಅವರು, ಕ್ಷೇತ್ರದ ಅಭಿವೃದ್ದಿಯೇ ನನ್ನ ಮುಖ್ಯ ಗುರಿಯಾಗಿದ್ದು, ತಾಲ್ಲೂಕಿನ ಜನರ ಕನಸನ್ನು ನನಸು ಮಾಡುವಲ್ಲಿ ಕೆಲಸಗಳನ್ನು ಆರಂಭಿಸುತ್ತೇನೆ. ಕ್ಷೇತ್ರದ ಅಭಿವೃದ್ದಿಗಾಗಿ ನಾನು ಕೂಡಾ ಕೆಲಸ ಮಾಡಿಸಿದ್ದೇನೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಕ್ಷೇತ್ರದ ಅಭಿವೃದ್ದಿಗೆ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ಮತದಾರರು ನಮ್ಮಿಬ್ಬರ ಅಭಿವೃದ್ದಿ ಕಾರ್ಯವನ್ನು ಗಮನಿಸಿ ಮತ ನೀಡಿದ್ದಾರೆ. ಹೀಗಾಗಿ ನನಗೆ ಗೆಲುವು ದೊರಕಿದೆ ಎಂದು ಹೇಳಿದ್ದು, ಈ ವೇಳೆ ತಮ್ಮ ಪರವಾಗಿ ಪ್ರಚಾರ ಮಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಅಶ್ವಥ್ ನಾರಾಯಣ, ವಿಜಯೇಂದ್ರ ಅವರು ಸೇರಿದಂತೆ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದ್ದು, ಕೆ.ಆರ್. ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.