ಮೈಸೂರು : ಜಿಲ್ಲಾ ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ (32) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್‌ಮೆಂಟ್ ನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪ್ರದೀಪ್ ತಂದೆ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದು, ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿ.ಪಂ. ಮಾಜಿ ಅಧ್ಯಕ್ಷರಾಗಿದ್ದಾರೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.










