ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್.

56
firstsuddi

ಬೆಂಗಳೂರು : ರಾಜ್ಯಸಭೆ ಚುನಾವಣೆ ವೇಳೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರು ಮತ ಹಾಕುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬ್ಯಾಲೆಟ್ ಪೇಪರ್ ತೋರಿಸಿದ್ದಾರೆ ಎಂದು ಬಿಜೆಪಿ ಏಜೆಂಟರು ಕೊಠಡಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸಬೇಕು ಎಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು.

ದೂರಿನನ್ವಯ ಚುನಾವಣಾಧಿಕಾರಿಗಳು ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲಾ ರೀತಿಯ ಪರಿಶೀಲನೆ ನಡೆಸಿದ್ದಾರೆ. ರೇವಣ್ಣ ಕೇವಲ ಜೆಡಿಎಸ್ ಏಜೆಂಟರಿಗೆ ತೋರಿಸಿ ಮತ ಹಾಕಿದ್ದಾರೆ. ಕಾಂಗ್ರೆಸ್ ಏಜೆಂಟರಿಗೆ ತೋರಿಸಿಲ್ಲ. ಹೀಗಾಗಿ ಮತ ಅಸಿಂಧು ಆಗುವುದಿಲ್ಲ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ  ತಿಳಿಸಿದ್ದಾರೆ. ಈ ಮೂಲಕ ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್ ಸಿಕ್ಕಿದಂತಾಗಿದೆ.