ಜೈಲಿನಿಂದಲೇ ಜಾಕ್ವೆಲಿನ್ ಫರ್ನಾಂಡಿಸ್ ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್.

46
firstsuddi

ನವದೆಹಲಿ : 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಕೇಶ್ ಚಂದ್ರಶೇಖರ್ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪ್ರೇಮಪತ್ರ ಬರೆದಿದ್ದಾನೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಬಂಧನವಾಗುತ್ತಿದ್ದಂತೆಯೇ ಜಾಕ್ವೆಲಿನ್ ಗೂ ಕೂಡ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿತ್ತು. ವಂಚನೆಯ ಹಣದಲ್ಲೇ ನಟಿಗೆ ಉಡುಗೊರೆ ನೀಡಿದ್ದಾನೆ ಎಂದು ಆರೋಪಿಸಲಾಗಿತ್ತು. ಜಾಕ್ವೆಲಿನ್ ಕೂಡ ಬಂಧನವಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ, ನಟಿ ಮಧ್ಯಂತರ ಜಾಮೀನು ಪಡೆದುಕೊಂಡರು. ಆದರೂ, ನಿರಂತರವಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಇದರ ಜೊತೆಗೆ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ ಗೆ ಕಿರಿಕಿರಿ ಉಂಟು ಮಾಡುತ್ತಿದ್ದಾನೆ. ಹೋಳಿ ಸಂದರ್ಭದಲ್ಲಿ ನಟಿಗೆ ಲವ್ ಲೆಟರ್ ಬರೆದಿದ್ದಾನೆ.

ಪತ್ರದಲ್ಲಿ ಏನಿದೆ?
ಒಳ್ಳೆಯ ವ್ಯಕ್ತಿ, ನನ್ನ ಬ್ಯೂಟಿಫುಲ್ ಜಾಕ್ವೆಲಿನ್ ಗೆ ಹೋಳಿ ಶುಭಾಶಯ. ಈ ದಿನ ಬಣ್ಣಗಳ ಹಬ್ಬ. ಮರೆಯಾದ ಬಣ್ಣಗಳು 100 ಪಟ್ಟು ಹೆಚ್ಚಾಗಿ ನಿಮ್ಮ ಬಳಿ ಬರುತ್ತವೆ. ಈ ವರ್ಷ ನಿಮ್ಮ ಬದುಕು ಪ್ರಕಾಶಮಾನವಾಗುತ್ತದೆ. ಆ ರೀತಿ ಆಗುವಂತೆ ಮಾಡೋದು ನನ್ನ ಜವಾಬ್ದಾರಿ. ಐ ಲವ್ ಯೂ ಮೈ ಬೇಬಿ ಗರ್ಲ್. ಯಾವಾಗಲೂ ನಗುತ್ತಾ ಇರು. ಲವ್ ಯು ಮೈ ಪ್ರಿನ್ಸೆಸ್. ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಬೊಮ್ಮ ನೀನು, ನನ್ನ ಪ್ರೀತಿ ಎಂದು ಪತ್ರದಲ್ಲಿ ಸುಕೇಶ್ ಬರೆದುಕೊಂಡಿದ್ದಾನೆ.