ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸುತ್ತಿಕೊಂಡು ಬಾಲಕ ಸಾವು…

58
firstsuddi

ದಾವಣಗೆರೆ: ಬಾಲಕನೊಬ್ಬ ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸುತ್ತಿಕೊಂಡು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.

ಪಿ.ಜೆ ಕೊಟ್ರೇಶ್ (14) ಮೃತ ಬಾಲಕ. ಈತ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದನು. ಈತ ಶಾಲೆ ಮುಗಿಸಿ ಬಂದು ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದನು.

ಹೀಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಜೋಕಾಲಿ ಹಗ್ಗವು ಆಕಸ್ಮಿಕವಾಗಿ ಕೊರಳಿಗೆ ಸುತ್ತಿಕೊಂಡಿದೆ. ಪರಿಣಾಮ ಹಗ್ಗ ಬಿಗಿಯಾಗಿ ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.