ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ ಅವರ ಪತ್ನಿ ನಿಧನ…

100
firstsuddi

ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಪತ್ನಿ ಸತ್ಯಭಾಮಾ ಸಿ. ಕಂಬಾರ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರು 15 ದಿನ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಇಂದು ಬೆಳಗ್ಗೆ 6-15 ಕ್ಕೆ ನಗರದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸತ್ಯಭಾಮಾ ಅವರು ಪತಿ ಡಾ. ಚಂದ್ರಶೇಖರ್ ಕಂಬಾರ, ಒಬ್ಬ ಪುತ್ರ, ಮೂವರು ಪುತ್ರಿಯರು, ಮೊಮ್ಮಕ್ಕಳು, ಬಂಧು ಬಳಗ, ಆಪ್ತರನ್ನು ಅಗಲಿದ್ದಾರೆ. ಬೆಳಗ್ಗೆ 9-30ಕ್ಕೆ ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಮೃತರ ಅಂತಿಮ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮ ಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸತ್ಯಭಾಮ ಚಂದ್ರಶೇಖರ್ ಕಂಬಾರ ಅವರ ನಿಧನಕ್ಕೆ ಸಿಎಂ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.