ಜ್ಞಾನವಾಪಿ ಮಸೀದಿ ವಿವಾದ : ವಿಚಾರಣೆ ಮೇ 26ಕ್ಕೆ ಮುಂದೂಡಿದ ಕೋರ್ಟ್.

48
firstsuddi

ವಾರಣಾಸಿ : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ವಾರಾಣಸಿಯ ಜಿಲ್ಲಾ ನ್ಯಾಯಾಲಯ ಮೇ 26ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಕೃಷ್ಣ ಅವರು ಇಂದು ಆದೇಶ ನೀಡಿದ್ದು, ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು. ಅದಕ್ಕೂ ಮುನ್ನ ಏಳು ದಿನಗಳೊಳಗೆ ವೀಡಿಯೋಗ್ರಫಿ ಸರ್ವೆಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಶಿವಲಿಂಗ ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಸಲ್ಲಿರುವ ಅರ್ಜಿ 1991ರ ಕಾಯಿದೆ ಮತ್ತು ಆದೇಶ 7, ನಿಯಮ 11 ಉಲ್ಲಂಘಿಸುತ್ತದೆ. ಹೀಗಾಗಿ ಇಡೀ ಪ್ರಕರಣವನ್ನು ವಜಾ ಮಾಡಬೇಕು ಎಂದು ಮಸೀದಿ ಪರ ಅರ್ಜಿದಾರರು ವಾದ ಮಂಡಿಸಿದ್ದರು. ಇದಕ್ಕೆ ಪ್ರತಿವಾದ ಸಲ್ಲಿಸಿದ್ದ ಹಿಂದೂ ಸೇನಾ ಪರ ವಕೀಲರು, ಮಸೀದಿ ದೇವಸ್ಥಾನಕ್ಕೆ ಸೇರಿದ್ದು, ಇದನ್ನು ಅತಿಕ್ರಮಣ ಮಾಡಿಕೊಂಡು ಮಸೀದಿ ನಿರ್ಮಿಸಲಾಗಿದೆ. ಈಗ ಶಿವಲಿಂಗ ಪತ್ತೆಯಾಗಿರುವುದೇ ಇದಕ್ಕೆ ಸಾಕ್ಷಿ. ಹೀಗಾಗಿ ಸರ್ವೆ ವೇಳೆ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.