ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದ್ದು, ಇದೀಗ ಮಣಿಪಾಲ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್ವೈ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಈ ಹಿಂದೆ ಕೊರೊನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಪ್ರಶ್ನಿಸಿ, ಶೀಘ್ರ ಗುಣಮುಖರಾಗುವಂತೆ ಬಿ.ಎಸ್ ಯಡಿಯೂರಪ್ಪ ಅವರಿಗೆ ಶುಭ ಹಾರೈಸಿದೆ.
ಇನ್ನೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಅವರಿಗೆ ಕೊರೊನಾ ಸೋಂಕು ತಗಲಿರುವ ಸುದ್ದಿ ತಿಳಿದು ತುಂಬಾ ಬೇಸರವಾಯಿತು. ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ @BSYBJP ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ.
ಈ ಹಿಂದೆ ಕೊರೋನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು.
ಇಂತರ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ?
— Karnataka Congress (@INCKarnataka) April 16, 2021
ಮುಖ್ಯಮಂತ್ರಿ @BSYBJP ಅವರಿಗೆ ಕೊರೊನಾ ಸೋಂಕು ತಗುಲಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಶೀಘ್ರ ಅವರು ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
— Siddaramaiah (@siddaramaiah) April 16, 2021










