ಮಂಗಳೂರು : ಟಯರ್ ವರ್ಕ್ ಅಂಗಡಿಯೊಂದರಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಅಲಂಕಾರು ಗ್ರಾಮದ ರಾಜೇಶ್ ಪೂಜಾರಿ(43) ಮೃತ ಕಾರ್ಮಿಕ. ಉಪ್ಪಿನಂಗಡಿ ಗಾಂಧಿ ಪಾರ್ಕ್ ಬಳಿ ಇರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಟಯರ್ ರಿಸೋಲ್ ಮಾಡುತ್ತಿದ್ದಾಗ ಏಕಾಏಕಿ ಏರ್ ಕಂಪ್ರೆಸರ್ ಸ್ಫೋಟವಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕೂಡಲೇ ಕರೆದೊಯ್ದರೂ ಅಷ್ಟೋತ್ತಿಗಾಗಲೇ ಮೃತಪಟ್ಟಿದ್ದರು. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










